ಯೋಹಾನ 7:36 - ದೆವಾಚಿ ಖರಿ ಖಬರ್36 ತೊ ಅಮಿ ತೆಕಾ ಹುಡಕ್ತಾಂವ್ ಖರೆ ತೊ ಅಮ್ಕಾ ಗಾವಿನಾ, ಅನಿ ಮಿಯಾ ಖೈ ಜಾತಾ ಥೈ ಯೆವ್ಕ್ ಹೊಯ್ನಾ ಮನ್ತಾ. ಹೆಚ್ಯಾ ಗೊಸ್ಟಿಯಾಂಚೊ ಅರ್ತ್ ಕಾಯ್?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ‘ನನ್ನನ್ನು ಅರಸುವಿರಿ, ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನಿರುವಲ್ಲಿಗೆ ನೀವು ಬರುವಂತಿಲ್ಲ’ ಎಂದು ಇವನು ಹೇಳುವುದರ ಅರ್ಥ ಏನಿರಬಹುದು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಎಂದು ಅವನು ಹೇಳಿದ ಮಾತು ಏನಿದ್ದೀತು? ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಇವನು (ಯೇಸು), ‘ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ’ ಎನ್ನುತ್ತಾನೆ. ಅಲ್ಲದೆ ಇವನು, ‘ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |