ರೋಮಾಪುರದವರಿಗೆ 10:21 - ದೆವಾಚಿ ಖರಿ ಖಬರ್21 ಖರೆ ಇಸ್ರಾಯೆಲಾಚ್ಯಾ ವಿಶಯಾತ್ ತೊ ಮನ್ತಾ, “ಮಾಕಾ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ಅನಿ ಕಿಚ್ಚಾನಿ ಹೊತ್ತ್ಯಾ ಲೊಕಾಕ್ನಿ ಯಾಂಗ್ ಮಾರುನ್ ಧರುಕ್ ಮನುನ್ ಮಿಯಾ ಮಾಜಿ ಹಾತಾ, ದಿಸ್ ಬರ್ ತೆಂಚ್ಯಾ ಭೊತ್ಯಾನಿ ಧರುನ್ ಘೆವ್ನ್ ಹೊತ್ತೊ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು - ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತಾಡುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನೆಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಇಸ್ರೇಲಿನ ಜನರ ಬಗ್ಗೆ ದೇವರು: “ನಾನು ಆ ಜನರಿಗಾಗಿ ದಿನವೆಲ್ಲಾ ಕಾದುಕೊಂಡಿದ್ದೆನು, ಆದರೆ ಅವರು ವಿಧೇಯರಾಗಲಿಲ್ಲ; ನನ್ನನ್ನು ಹಿಂಬಾಲಿಸಲಿಲ್ಲ” ಎನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿ |