ರೋಮಾಪುರದವರಿಗೆ 11:26 - ದೆವಾಚಿ ಖರಿ ಖಬರ್26 ಅಶೆ ಸಗ್ಳೆ ಇಸ್ರಾಯೆಲ್ ಬಚಾವ್ ಹೊತಾ. ಪವಿತ್ರ್ ಪುಸ್ತಕ್ ಮನ್ತಾ, “ಸುಟ್ಕಾದಿನಾರೊ ಸಿಯೊನಾತ್ನಾ ಯೆತಾ ಅನಿ ಜಾಕೊಬಾಚ್ಯಾ ಘರಾನ್ಯಾತ್ಲೆ ಸಗ್ಳೆ ಬುರ್ಶೆಪಾನ್ ಕಾಡುನ್ ಟಾಕ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು. ಅಧ್ಯಾಯವನ್ನು ನೋಡಿ |