3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.
3 ಕೆಟ್ಟದ್ದನ್ನು ಮಾಡುವವನೇ ಹೊರತು ಒಳ್ಳೆಯದನ್ನು ಮಾಡುವವನು ಅಧಿಕಾರಿಗೆ ಭಯಪಡಬೇಕಾಗಿಲ್ಲ. ಅಧಿಕಾರಿಯ ಮುಂದೆ ನಿರ್ಭಯನಾಗಿರಲು ನಿನಗೆ ಇಷ್ಟವಿದ್ದರೆ ಒಳ್ಳೆಯದನ್ನೇ ಮಾಡುತ್ತಿರು. ಆಗ ಆತನು ನಿನ್ನನ್ನು ಪ್ರಶಂಶಿಸುವನು.
3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವದೇ ಹೊರತು ಒಳ್ಳೇ ಕೆಲಸ ಮಾಡುವವನಿಗೆ ಭಯವೇನೂ ಇಲ್ಲ. ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವದು;
3 ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.