ರೋಮಾಪುರದವರಿಗೆ 8:23 - ದೆವಾಚಿ ಖರಿ ಖಬರ್23 ಸಗ್ಳಿ ರಚ್ನಾ ಎವ್ಡಿಚ್ ಉಸ್ಕಾರುನ್ಗೆತ್ ನಾ, ಪವಿತ್ರ್ ಅತ್ಮೊಚ್ ದೆವಾಚೆ ಪಯ್ಲಿಚಿ ದೆನ್ಗಿ ಮನುನ್ ಘೆಟಲ್ಲೆ ಅಮಿಬಿ ಅಮ್ಚ್ಯಾ ಸಗ್ಳ್ಯಾ ಆಂಗಾಕ್ ಗುಲಾಮ್‍ಪಾನಾತ್ನಾ ಸುಟ್ಕಾ ಗಾವುನ್ ದೆವಾಚಿ ಪೊರಾ ಮನುನ್ ಘೆತಲೊ ಭಾಗ್ ಕನ್ನಾ ಗಾವ್ತಾ ಮನುನ್ ರಾಕುನ್ಗೆತ್ ಹಾಂವ್, ಅನಿ ಹೆಚ್ಯಾಸಾಟ್ನಿ ಅಮ್ಚ್ಯಾ ಭುತ್ತುರುಚ್ ಉಸ್ಕಾರುನ್ಗೆತ್ ಹಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ. ಅಧ್ಯಾಯವನ್ನು ನೋಡಿ |