ರೋಮಾಪುರದವರಿಗೆ 8:24 - ದೆವಾಚಿ ಖರಿ ಖಬರ್24 ಕಶ್ಯಾಕ್ ಮಟ್ಲ್ಯಾರ್ ಹ್ಯಾ ಬರೊಸ್ಯಾಚ್ಯಾ ವೈನಾಚ್ ಅಮ್ಕಾ ಸುಟ್ಕಾ ಗಾವ್ತಾ; ಖರೆ ಅಮಿ ಬರೊಸೊ ಥವ್ನ್ ಹೊತ್ತೆ ಅಮ್ಚ್ಯಾ ಡೊಳ್ಯಾಕ್ನಿ ದಿಸುಕ್ ಲಾಗ್ಲಾ ಹೊಲ್ಯಾರ್ ತೊ ಬರೊಸೊ ನ್ಹಯ್ ಕಶ್ಯಾಕ್ ಮಟ್ಲ್ಯಾರ್ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾವು ರಕ್ಷಣೆಯನ್ನು ಹೊಂದಿದವರಾದರೂ ಇನ್ನು ಎದುರುನೋಡುವವರಾಗಿದ್ದೇವೆ. ಎದುರುನೋಡುವ ಪದವಿ ಪ್ರತ್ಯಕ್ಷವಾಗಿದ್ದರೆ ಎದುರುನೋಡುವದೇಕೆ? ಪ್ರತ್ಯಕ್ಷವಾದದ್ದನ್ನು ಎದುರುನೋಡುವದುಂಟೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ? ಅಧ್ಯಾಯವನ್ನು ನೋಡಿ |