ರೋಮಾಪುರದವರಿಗೆ 9:27 - ದೆವಾಚಿ ಖರಿ ಖಬರ್27 ಅನಿ ಇಸಾಯಿಯಾ ಇಸ್ರಾಯೆಲಾಚ್ಯಾ ವಿಶಯಾತ್ ಸೊಡ್ಸುನ್ ಸಾಂಗುನ್ಗೆತ್: “ಇಸ್ರಾಯೆಲಾಚಿ ಲೊಕಾ ಸಮುಂದರಾಚ್ಯಾ ದಂಡೆಕ್ ಹೊತ್ತ್ಯಾ ರೆತಿಚ್ಯಾ ದಾನಾಂಚ್ಯಾ ಎವ್ಡಿ ಲೈ ರ್‍ಹಾಲ್ಯಾರ್‍ಬಿ, ತ್ಯೆಂಚ್ಯಾತ್ಲೆ ಖಾಲಿ ಉಲ್ಲೆ ಜಾನಾ ಎವ್ಡೆಚ್ ಬಚಾವ್ ಹೊತ್ತ್ಯಾತ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27-28 ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು. ಅಧ್ಯಾಯವನ್ನು ನೋಡಿ |