ಲೂಕ 10:22 - ದೆವಾಚಿ ಖರಿ ಖಬರ್22 “ಮಾಜ್ಯಾ ಬಾಬಾನ್ ಮಾಕಾ ಸಗ್ಳೆ ದಿಲ್ಯಾನಾಯ್,ಬಾಬಾಕ್ ಸೊಡುನ್ ಕೊನಾಕ್ಬಿ ಲೆಕ್ ಕೊನ್ ಮನುನ್ ಗೊತ್ತ್ ನಾ, ಬಾಬಾ ಕೊನ್ ಮನುನ್ ಲೆಕಾಕ್ ಅನಿ ತೆನಿ ಎಚುನ್ ಕಾಡುನ್, ಹೆಚ್ಯಾ ವಿಶಯಾತ್ ಸಾಂಗಲ್ಲ್ಯಾಕ್ನಿ ಸೊಡುನ್ ಕೊನಾಕ್ಬಿ ಗೊತ್ತ್ ನಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು. ಅಧ್ಯಾಯವನ್ನು ನೋಡಿ |