ಲೂಕ 10:30 - ದೆವಾಚಿ ಖರಿ ಖಬರ್30 ತನ್ನಾ ಜೆಜುನ್ “ಎಕ್ ಮಾನುಸ್ ಹೊತ್ತೊ, ತೊ ಜೆರುಜಲೆಮಾಕ್ನಾ, ಜೆರಿಕೊಕ್ ಜಾವ್‍ಲಾಗಲ್ಲೊ, ತನ್ನಾ ಚೊರಾನಿ ತೆಕಾ ಧರ್‍ಲ್ಯಾನಿ,ಅನಿ ತೆಚ್ಯೆಕ್ಡೆ ಹೊತ್ತೆ ಸಗ್ಳೆ ಕಾಡುನ್ ಘೆಟ್ಲ್ಯಾನಿ, ಅನಿ ತೆಕಾ ಮಾರುನ್ ಅರ್‍ದೊ ಜಿವ್ ಕರ್‍ಲ್ಯಾನಿ”, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ಯೆರೂಸಲೇವಿುನಿಂದ ಘಟ್ಟಾ ಇಳಿದು ಯೆರಿಕೋವಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಯೇಸು: “ಒಬ್ಬ ಮನುಷ್ಯನು ಯೆರೂಸಲೇಮಿನಿಂದ ಯೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನ ವಸ್ತ್ರಗಳನ್ನು ಕಿತ್ತುಕೊಂಡು, ಅವನನ್ನು ಗಾಯಮಾಡಿ, ಅರೆಜೀವ ಮಾಡಿಬಿಟ್ಟು ಹೊರಟು ಹೋದರು. ಅಧ್ಯಾಯವನ್ನು ನೋಡಿ |