ಲೂಕ 11:14 - ದೆವಾಚಿ ಖರಿ ಖಬರ್14 ಜೆಜುನ್ ಎಕ್ ಮುಕ್ಕ್ಯಾ ಗಿರ್‍ಯಾಕ್ ಭಾಯ್ರ್ ಕಾಡ್ಲ್ಯಾನ್, ಅನಿ ಕಾಡುನ್ ಹೊಲ್ಲ್ಯಾ ತನ್ನಾ, ತೊ ಮಾನುಸ್ ಬರೆಚ್ ಬೊಲುಕ್‍ಲಾಗ್ಲೊ, ಹೆ ಬಗುನ್ ಸಗ್ಳಿ ಲೊಕಾ ಅಜಾಪ್ ಹೊಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಂದಾನೊಂದು ಸಮಯದಲ್ಲಿ ಆತನು ಮೂಕ ದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟುಹೋದ ಮೇಲೆ ಮೂಕನು ಮಾತಾಡಿದನು; ಅದಕ್ಕೆ ಜನರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿ |