ಲೂಕ 11:31 - ದೆವಾಚಿ ಖರಿ ಖಬರ್31 ಝಡ್ತಿಚ್ಯಾ ದಿಸಿ, ಶೆಬಾ ಮನ್ತಲ್ಯಾ ಗಾಂವಾಚಿ ರಾನಿ ಸೈತ್, ಹ್ಯಾ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಚುಕಿದಾರ್ ಮನುನ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಸೊಲೊಮೊನ್ ರಾಜಾಚ್ಯಾ ಬುದ್ವಂತ್ಕಿಚ್ಯಾ ಗೊಸ್ಟಿಯಾ ಆಯ್ಕುಕ್ ತಿ, ಅಪ್ನಾಚ್ಯಾ ದೆಸಾತ್ನಾ ಫಿರು-ಫಿರುನ್ಗೆತ್ ಯೆಲ್ಲಿ. ಅನಿ ಮಿಯಾ ತುಮ್ಕಾ ಸಾಂಗ್ತಾ, ಹಿತ್ತೆ ಕಾಯ್ಕಿ ಸಾಲ್ಮಾವಾಚ್ಯಾನ್ಕಿ ಮೊಟೆ ಹಾಯ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿ |