ಲೂಕ 12:20 - ದೆವಾಚಿ ಖರಿ ಖಬರ್20 ಖರೆ ದೆವಾನ್ ತೆಕಾ “ಪಿಶ್ಯಾ! ಆಜ್ ರಾಚ್ಚೆ ತಿಯಾ ತುಜೊ ಜಿವ್ ಮಾಕಾ ಪರ್ತುನ್ ದಿವ್ಕ್ ಪಾಜೆ; ತನ್ನಾ ತಿಯಾ ತುಕಾ ಮನುನ್ ಗೊಳಾ ಕರುಕ್ ಥವಲ್ಲೆ ಹೆ ಸಗ್ಳೆ ಕೊನಾಚೆ ಹೊತಾ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |