ಲೂಕ 12:27 - ದೆವಾಚಿ ಖರಿ ಖಬರ್27 ತಿ, ಡಂಗ್ಳಾತ್ಲಿ ಫುಲ್ಲಾ ಕಸೆ ವಾಡ್ತ್ಯಾತ್ ಬಗಾ; ತೆನಿ ಕಾಮ್ ಕರಿನ್ಯಾತ್, ನಾ ಅಪ್ನಾಕ್ ಮನುನ್ ಕಪ್ಡೆ ತಯಾರ್ ಕರಿನ್ಯಾತ್. ಖರೆ ಮಿಯಾ ತುಮ್ಕಾ ಸಾಂಗ್ತಾ, ಸಾಲ್ಮಾವ್ ರಾಜಾ ಸೈತ್, ಅಪ್ನಾಚ್ಯಾ ಸಗ್ಳ್ಯಾ ವೈಭವಾನ್ ಹ್ಯಾತುರ್‍ಲ್ಯಾ ಎಕುಚ್ಎಕ್ ಫುಲ್ಲಾ ಸರ್ಕೊ ನೆಸುಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ; ಆದರೂ ಈ ಹೂವುಗಳೊಳಗೆ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |