ಲೂಕ 13:34 - ದೆವಾಚಿ ಖರಿ ಖಬರ್34 ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿ |