ಲೂಕ 15:30 - ದೆವಾಚಿ ಖರಿ ಖಬರ್30 ಖರೆ, ಹ್ಯಾ ತುಜ್ಯಾ ಲೆಕಾನ್ ತುಜಿ ಸಗ್ಳಿ ಆಸ್ತಿ ಅನಿ ಪೈಸೆ ರಾಂಡಾ ಕರುನ್ ಹಾಳ್ ಕರ್‍ಲ್ಯಾನ್, ಅನಿ ತೊ ಪರ್ತುನ್ ಯೆಲಾ ಮನುನ್ ತಿಯಾ ಬರೊ ತಯಾರ್‍ಲೊ ಪುಟ್ಪುಟಿತ್ ಪಾಡ್ಕು ಮಾರ್ಲೆಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು. ಅಧ್ಯಾಯವನ್ನು ನೋಡಿ |