ಲೂಕ 15:7 - ದೆವಾಚಿ ಖರಿ ಖಬರ್7 ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ನ್ಹವದಾರ್ ನ್ಹವ್ ಧರ್ಮಾನಿ ಚಲ್ತಲ್ಯಾ, ಅನಿ ಮನ್ ಬದ್ಲುಕ್ ತಯಾರ್ ನಸಲ್ಲ್ಯಾ ಲೊಕಾಂಚ್ಯಾನ್ಕಿ, ಮನ್ ಬದ್ಲುನ್ ಬರೊ ಹೊಲ್ಲ್ಯಾ ಎಕ್ ಪಾಪಿ ಮಾನ್ಸಾಸಾಟ್ನಿ ಸರ್‍ಗಾತ್ ಲೈ ಕುಶಿ ಹೊತಾ, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |