ಲೂಕ 23:2 - ದೆವಾಚಿ ಖರಿ ಖಬರ್2 ಥೈ ತೆನಿ ಲೊಕಾಕ್ನಿ “ಸಿಜರಾಕ್ ತೆರ್‍ಗಿ ದಿವ್‍ನಕಾಶಿ, ಮನುನ್ ಚುಕ್ ಹೊತ್ತೆ ಶಿಕ್ವುತಲ್ಯಾ, ಅನಿ ಅಪ್ನಿ ಮೆಸ್ಸಿಯಾ ಅನಿ, ರಾಜಾ ಮನುನ್ ಮನ್ತಲ್ಯಾ ಎಕ್ ಮಾನ್ಸಾಕ್ ಅಮಿ ಧರುನ್ ಹಾನ್ಲಾಂವ್” ಮನುನ್ ಜೆಜು ವರ್‍ತಿ ಝುಟೊ ಅಪ್ಪಾದ್ ಘಾಲುಕ್‍ಲಾಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿ |