26 ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
26 ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು.
26 ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
26 ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.
26 ಸೈನಿಕರು ಯೇಸುವನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆದ ಸೀಮೋನನೆಂಬವನನ್ನು ಹಿಡಿದು, ಅವನ ಮೇಲೆ ಶಿಲುಬೆಯನ್ನು ಹೊರಿಸಿ, ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.