ಲೂಕ 23:34 - ದೆವಾಚಿ ಖರಿ ಖಬರ್34 ತನ್ನಾ ಜೆಜುನ್ “ಬಾಬಾ ತೆಂಕಾ ಮಾಪ್ ಕರ್, ತೆನಿ ಕಾಯ್ ಕರುಲ್ಯಾತ್ ಮನುನ್ ತೆಂಕಾಚ್ ಗೊತ್ತ್ ನಾ”, ಮಟ್ಲ್ಯಾನ್. ಚಿಟಿಯಾ ಕಾಡುನ್ ಕೊನಾಕ್ ಯೆತಾತ್ ಬಗುಂವಾ ಮನುನ್ ತೆನಿ ತೆಚೆ ಕಪ್ಡೆ ವಾಟುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು. ಅಧ್ಯಾಯವನ್ನು ನೋಡಿ |