ಲೂಕ 4:35 - ದೆವಾಚಿ ಖರಿ ಖಬರ್35 ತನ್ನಾ ಜೆಜುನ್ “ಗಪ್-ರ್‍ಹಾಮ್ ಅನಿ ತ್ಯಾ ಮಾನ್ಸಾತ್ನಾ ಭಾಯ್ರ್ ಯೆ” ಮನುನ್ ತಾಕಿತ್ ದಿಲ್ಯಾನ್. ತನ್ನಾ ಗಿರ್‍ಯಾನ್ ತ್ಯಾ ಮಾನ್ಸಾಕ್ ತೆಂಚ್ಯಾ ಇದ್ರಾಕ್ ಪಾಡ್ವುಲ್ಯಾನ್ ಅನಿ ತೆಕಾ ಕಾಯ್ಬಿ ವಾಯ್ಟ್ ಕರಿನಸ್ತಾನಾ ತೊ ತೆಚ್ಯಾ ಭುತ್ತುರ್‍ನಾ ಬಾಯ್ರ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟುಹೋಗು ಎನ್ನಲಾಗಿ ಆ ದೆವ್ವವು ಅವನನ್ನು ನಡುವೆ ಕೆಡವಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು. ಅಧ್ಯಾಯವನ್ನು ನೋಡಿ |