ಲೂಕ 5:14 - ದೆವಾಚಿ ಖರಿ ಖಬರ್14 ಮಾನಾ ಜೆಜುನ್ ತ್ಯಾ ಮಾನ್ಸಾಕ್ “ಕೊನಾಕ್ಬಿ ಸಾಂಗುನಕ್ಕೊ, ಖರೆ ಯಾಜಕಾಕ್ಡೆ ಜಾ ಅನಿ ತುಕಾಚ್ ತೆಕಾ ದಾಕ್ವು, ಮಾನಾ ಸಗ್ಳ್ಯಾಕ್ನಿ ತಿಯಾ ಶುದ್ದ್ ಹೊಲೆ ಮನುನ್ ದಾಕ್ವುಸಾಟ್ನಿ ಮೊಯ್ಜೆನ್ ಸಾಂಗಟಲ್ಲಿ ಬಲಿ ಭೆಟ್ವು” ಮನುನ್ ತಾಕಿತ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |