17 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
17 ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.
17 ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.
17 ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.
17 ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ