ಲೂಕ 7:39 - ದೆವಾಚಿ ಖರಿ ಖಬರ್39 ತ್ಯಾ ಫಾರಿಜೆವಾನ್ ಹೆ ಬಗುನ್, ಅಪ್ಲ್ಯಾ ಅಪ್ನಿಚ್ “ಹ್ಯೊ ಮಾನುಸ್ ಖರೆಚ್ ಪ್ರವಾದಿ ಹೊಲ್ಯಾರ್,ತೆಕಾ ಅಪಡಲ್ಲಿ ಬಾಯ್ಕೊಮನುಸ್ ಕೊನ್; ಅನಿ ಹಿ ಬಾಯ್ಕೊಮನುಸ್ ಕಸ್ಲೆ ಪಾಪಾಚೆ ಜಿವನ್ ಕರ್‍ತಾ ಮನುನ್, ಹೆಕಾ ಕಳ್ತಲೆ ಹೊತ್ತೆ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು. ಅಧ್ಯಾಯವನ್ನು ನೋಡಿ |