ಲೂಕ 8:25 - ದೆವಾಚಿ ಖರಿ ಖಬರ್25 ತನ್ನಾ ತೆನಿ ಶಿಸಾಕ್ನಿ “ತುಮ್ಚೊ ವಿಶ್ವಾಸ್ ಖೈ ಗೆಲೊ?” ಮನುನ್ ಮಟ್ಲ್ಯಾನ್. ಖರೆ ತೆನಿ ಭಿಂಯಾಲೆ, ಅನಿ ಅಜಾಪ್ ಹೊಲೆ, ಅನಿ “ಹ್ಯೊ ಕಸ್ಲೊ ಮಾನುಸ್? ವಾರ್ಯಾಕ್ ಅನಿ ಲ್ಹಾಟಾಕ್ನಿ ತೊ ಹುಕುಮ್ ದಿತಾ ಅನಿ ತೆನಿ ಹೆನಿ ಸಾಂಗಟಲ್ಲೆ ಆಯಿಕ್ತ್ಯಾತ್ ಮನುನ್ ಅಪ್ನಾ-ಅಪ್ನಾಚ್ಯಾ ಮದ್ದಿಚ್” ಬೊಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |