ಲೂಕ 9:22 - ದೆವಾಚಿ ಖರಿ ಖಬರ್22 ಅನಿ ತೆನಿ “ಮಾನ್ಸಾಚ್ಯಾ ಲೆಕಾನ್ ಕಸ್ಟ್ ಸೊಸುಕ್ ಪಾಜೆ, ಅನಿ ಜಾನ್ತ್ಯಾಂಚ್ಯಾ, ಮುಖ್ಯ ಯಾಜಕಾಂಚ್ಯಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮರ್‍ಯಾದ್ ಕಾಡುನ್ ಘೆವ್ಕ್ ಪಾಜೆ. ತೆಕಾ ಜಿವಾನಿ ಮಾರ್‍ತ್ಯಾತ್. ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ, ತೊ ಝಿತ್ತೊ ಹೊವ್ನ್ ಉಟುನ್ ಯೆತಾ”, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು. ಅಧ್ಯಾಯವನ್ನು ನೋಡಿ |