39 ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
39 ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.
39 ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.
39 ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.