ಲೂಕ 9:42 - ದೆವಾಚಿ ಖರಿ ಖಬರ್42 ತೊ ಝಿಲ್ಗೊ ಜೆಜುಚ್ಯಾ ಜಗ್ಗೊಳ್ ಯೆವ್‍ಲಾಗಲ್ಲೊ. ತನ್ನಾ ಗಿರ್‍ಯಾನ್ ತೆಕಾ ಜಿಮ್ನಿಕ್ ಪಾಡ್ವುಲ್ಯಾನ್, ಅನಿ ತೆಕಾ ಲೊಳಿ ಸಾರ್ಕೆ ಕರ್‍ಲ್ಯಾನ್ ಜೆಜುನ್ ತ್ಯಾ ಗಿರ್‍ಯಾಕ್ “ಭಾಯ್ರ್ ಜಾ” ಮನುನ್ ತಾಕಿತ್ ದಿಲ್ಯಾನ್. ತನ್ನಾ ತೊ ಗಿರೊ ಗೆಲೊ, ಅನಿ ತೊ ಝಿಲ್ಗೊ ಬರೊ ಹೊಲೊ, ಅನಿ ತೆನಿ ತೆಚ್ಯಾ ಲೆಕಾಕ್ ತ್ಯಾ ಮಾನ್ಸಾಕ್ಡೆ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |