Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಈಗ ಅದೋನೀಯನು ನಮ್ಮ ಒಡೆಯರೂ ಅರಸರೂ ಆದ ನಿಮಗೂ ತಿಳಿಯದೆಯೇ ರಾಜನಾಗಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿನಗೆ ತಿಳಿಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಈಗ ಅದೋನೀಯನು ತನ್ನನ್ನು ರಾಜನಾಗಿ ಮಾಡಿಕೊಳ್ಳುತ್ತಿದ್ದಾನೆ. ಇದು ನಿನಗೆ ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ, ಅರಸನಾಗಿರುವ ನನ್ನ ಒಡೆಯನಾದ ನೀವು ಅರಿಯದೆ ಇರುವಾಗ, ಅದೋನೀಯನು ರಾಜನಾಗಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:18
8 ತಿಳಿವುಗಳ ಹೋಲಿಕೆ  

ನಾತಾನನು, “ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.


“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.


ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು.


ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?


ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.


ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.


ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.


ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು