Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನ ಒಡೆಯರೂ ಅರಸರೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ತಾವೇ ಗೊತ್ತುಮಾಡಬೇಕೆಂದು ಇಸ್ರಯೇಲರೆಲ್ಲರು ಕುತೂಹಲದಿಂದ ಕಾದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:20
11 ತಿಳಿವುಗಳ ಹೋಲಿಕೆ  

ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’


ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.


ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.


ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.


ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.


“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.


ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು