1 ಅರಸುಗಳು 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |
ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.