1 ಅರಸುಗಳು 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ಕಾರ್ಯ ನಮ್ಮ ಒಡೆಯರೂ ಅರಸರೂ ಆದ ನಿಮ್ಮಿಂದಲೇ ನಡೆದಿರುವುದಾದರೆ, ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನಿಮ್ಮ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನನ್ನ ಒಡೆಯನಾದ ರಾಜನೇ, ನಮಗೆ ಹೇಳದೆ ಇದನ್ನು ಮಾಡಿದೆಯಾ? ದಯವಿಟ್ಟು ಹೇಳು, ನಿನ್ನ ನಂತರ ರಾಜನಾಗುವವನು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅರಸನಾದ ನನ್ನ ಒಡೆಯನಿಂದ ಈ ಕಾರ್ಯವಾಯಿತೋ? ಅರಸನಾದ ನನ್ನ ಒಡೆಯನು, ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನಿಮ್ಮ ಸೇವಕನಾದ ನನಗೆ ನೀವು ತಿಳಿಸದೆ ಹೋದಿರೋ?” ಎಂದನು. ಅಧ್ಯಾಯವನ್ನು ನೋಡಿ |