1 ಅರಸುಗಳು 1:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಿ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅಂದು ನಾನು ನಿನಗೆ ಮಾಡಿದ ಪ್ರಮಾಣವನ್ನು ಇಂದು ಪೂರೈಸುತ್ತೇನೆ. ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ನಾನು ನಿನಗೆ ಆ ಪ್ರಮಾಣವನ್ನು ಮಾಡಿದ್ದೆನು. ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನೆಂದೂ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ನಿನಗೆ ಪ್ರಮಾಣ ಮಾಡಿದ್ದೆನು. ನಾನು ನನ್ನ ವಾಗ್ದಾನವನ್ನು ಈಡೇರಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ, ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಮೇಲೆ ಆಣೆ ಇಡುತ್ತೇನೆ,” ಎಂದೂ ಪ್ರಮಾಣವಾಗಿ ಹೇಳಿದನು. ಅಧ್ಯಾಯವನ್ನು ನೋಡಿ |