Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:34
24 ತಿಳಿವುಗಳ ಹೋಲಿಕೆ  

ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.


ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.


ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.


ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.


ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.


ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,


ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,


ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.


ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.


ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.


ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.


ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು.


ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು