1 ಅರಸುಗಳು 1:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಮೇಲೆ ನೀವು ಅವನ ಹಿಂದೆ ಬನ್ನಿ; ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಯೇಲರ ಮತ್ತು ಯೆಹೂದ್ಯರ ಮೇಲೆ ಅವನನ್ನೇ ಅಧಿಪತಿಯನ್ನಾಗಿ ನೇಮಿಸಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಮೇಲೆ ನೀವು ಅವನ ಹಿಂದೆ ಬನ್ನಿರಿ; ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕೂತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲ್ಯರ ಮತ್ತು ಯೆಹೂದ್ಯರ ಮೇಲೆ ಅವನನ್ನೇ ಪ್ರಭುವನ್ನಾಗಿ ನೇವಿುಸಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಂತರ ಅವನೊಂದಿಗೆ ಹಿಂದಿರುಗಿ ಇಲ್ಲಿಗೆ ಬನ್ನಿ. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಹೊಸ ರಾಜನಾಗಿ ರಾಜ್ಯಭಾರ ಮಾಡಲಿ. ನಾನು ಸೊಲೊಮೋನನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಹಾಗೆ, ನೀವು ಅವನ ಹಿಂದೆ ಬನ್ನಿರಿ. ಏಕೆಂದರೆ ಅವನು ನನಗೆ ಬದಲಾಗಿ ಅರಸನಾಗಿರುವನು. ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ, ನಾಯಕನಾಗಿರಲು ನಾನು ಅವನನ್ನು ನೇಮಿಸಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |