1 ಅರಸುಗಳು 1:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು. ಅಧ್ಯಾಯವನ್ನು ನೋಡಿ |