Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಯಾಜಕ ಚಾದೋಕನೂ ಪ್ರವಾದಿ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜಾಭಿಷೇಕ ಮಾಡಿದ್ದಾರೆ. ಅಲ್ಲಿಂದ ಅವರು ಹರ್ಷಾನಂದದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕಮಾಡಿದರು. ಅಲ್ಲಿಂದ ಅವರು ಮಹಾಸಂತೋಷದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:45
7 ತಿಳಿವುಗಳ ಹೋಲಿಕೆ  

ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.


ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.


ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.


ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.


ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು