Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಎಂದು ಹೇಳಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ‘ನಾನು ಕಣ್ಣಾರೆ ಕಾಣುವಂತೆ ನನ್ನ ಮಕ್ಕಳಲ್ಲಿ ಒಬ್ಬನನ್ನು ಇಂದು ಸಿಂಹಾಸನದ ಮೇಲೆ ಕುಳ್ಳಿರಿಸಿದ ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:48
26 ತಿಳಿವುಗಳ ಹೋಲಿಕೆ  

“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.


ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.


ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.


ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.


ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.


ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು