Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ತಂದೆಯು - ನೀನು ಹಾಗೆ ಹೀಗೆ ಮಾಡಿದ್ದೇಕೆ ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿದ್ದು ಇರಲಿಲ್ಲ. ಅವನು ಬಹುಸುಂದರನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜನಾದ ದಾವೀದನು ತನ್ನ ಮಗನಾದ ಅದೋನೀಯನನ್ನು ಎಂದೂ ತಿದ್ದಲಿಲ್ಲ. ದಾವೀದನು, “ನೀನು ಹೀಗೇಕೆ ಮಾಡುತ್ತಿರುವೆ?” ಎಂದು ಅವನನ್ನು ಒಂದು ಸಾರಿಯಾದರೂ ಕೇಳಲಿಲ್ಲ. ಅದೋನೀಯನು ಅಬ್ಷಾಲೋಮನ ಬಳಿಕ ಹುಟ್ಟಿದ ಮಗ. ಅದೋನೀಯನು ಬಹಳ ಸುಂದರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ತಂದೆಯು ಎಂದಾದರೂ, “ನೀನು ಹೀಗೆ ಏಕೆ ಮಾಡಿದೆ?” ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಅವನು ಬಹು ಒಳ್ಳೆಯ ರೂಪವಂತನಾಗಿದ್ದನು. ಅಬ್ಷಾಲೋಮನ ತರುವಾಯ ಅವನ ತಾಯಿ ಅವನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:6
11 ತಿಳಿವುಗಳ ಹೋಲಿಕೆ  

ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.


ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.


ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು