1 ಅರಸುಗಳು 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀರಾಮನ ಹಡಗುಗಳು ಓಫೀರ್‍ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೀರಾಮನ ಹಡಗುಗಳು ಓಫೀರಿನಿಂದ ಬಂಗಾರವನ್ನು ತೆಗೆದುಕೊಂಡು ಬಂದವು. ಆ ಹಡಗುಗಳು ಮರಗಳನ್ನು ಮತ್ತು ರತ್ನಗಳನ್ನು ರಾಶಿರಾಶಿಯಾಗಿ ತಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀರಾಮನ ಹಡಗುಗಳು ಓಫೀರನಿಂದ ಬಂಗಾರ ಮಾತ್ರವಲ್ಲದೆ ಅನೇಕ ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದವು. ಅಧ್ಯಾಯವನ್ನು ನೋಡಿ |
ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.