Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ, ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನಾದ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ರಾಜನಾದ ಸೊಲೊಮೋನನು ಇತರ ದೇಶದ ರಾಜರಿಗೆ ಮರ್ಯಾದೆಗಾಗಿ ನೀಡುವ ಕಾಣಿಕೆಗಳನ್ನು ಶೆಬದ ರಾಣಿಗೂ ಕೊಟ್ಟನು. ಆಕೆಯು ಕೇಳಿದ್ದೆಲ್ಲವನ್ನೂ ಅವನು ನೀಡಿದನು. ಅನಂತರ ರಾಣಿಯು ಸೇವಕರೊಡನೆ ತನ್ನ ದೇಶಕ್ಕೆ ಹಿಂದಿರುಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನಾದ ಸೊಲೊಮೋನನು ಶೆಬದ ರಾಣಿಗೆ ಔದಾರ್ಯವಾಗಿ ಕೊಟ್ಟ ಕಾಣಿಕೆಗಳ ಹೊರತಾಗಿ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:13
10 ತಿಳಿವುಗಳ ಹೋಲಿಕೆ  

ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.


ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.


ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,


ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.


ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.


ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು