Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನೂ ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ಬಂಗಾರದ ತಗಡಿನಿಂದ ಮುನ್ನೂರು ಚಿಕ್ಕ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ನಾಲ್ಕು ಪೌಂಡುಗಳಷ್ಟು ಬಂಗಾರವಿತ್ತು. ರಾಜನು ಅವುಗಳನ್ನು “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:17
4 ತಿಳಿವುಗಳ ಹೋಲಿಕೆ  

ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.


ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು