Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಯೆರೂಸಲೇವಿುಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:2
15 ತಿಳಿವುಗಳ ಹೋಲಿಕೆ  

ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.


ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು.


ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ


“ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?


ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.


ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.


ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,


ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


“ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.


ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು