Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:27
9 ತಿಳಿವುಗಳ ಹೋಲಿಕೆ  

ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.


ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.


ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.


ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.


ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,


ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು