Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶೆಬದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೊಲೊಮೋನನು ಬಹು ಜ್ಞಾನಿಯೆಂಬುದು ಶೆಬದ ರಾಣಿಗೆ ತಿಳಿಯಿತು. ಅವನು ನಿರ್ಮಿಸಿದ್ದ ಸುಂದರವಾದ ಅರಮನೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಶೆಬದ ರಾಣಿಯು ಸೊಲೊಮೋನನ ಸಮಸ್ತ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:4
10 ತಿಳಿವುಗಳ ಹೋಲಿಕೆ  

ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.


ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.


ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು