1 ಅರಸುಗಳು 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು. ಅಧ್ಯಾಯವನ್ನು ನೋಡಿ |