1 ಅರಸುಗಳು 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧ ದಂಗೆಯೇಳುವಂತೆ ಮಾಡಿದರು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರೋಧವಾಗಿ ಏಳಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.