Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೇಸಳು ಆ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಬೆನೇಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:20
4 ತಿಳಿವುಗಳ ಹೋಲಿಕೆ  

ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.


ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.


ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು.


ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು