Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:23
18 ತಿಳಿವುಗಳ ಹೋಲಿಕೆ  

ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.


ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.


ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.


ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.


ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.


ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು