1 ಅರಸುಗಳು 11:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತನ್ನ ಸೇವಕನಾದ ದಾವೀದನ ನಿವಿುತ್ತವಾಗಿಯೂ ತಾನು ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದ ನಿವಿುತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು. ಅಧ್ಯಾಯವನ್ನು ನೋಡಿ |