1 ಅರಸುಗಳು 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಯಥಾರ್ಥಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.